- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ವೇಳೆಗೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಕುಟುಂಬದ ಆಪ್ತ ವಲಯದಿಂದ ಮಾಹಿತಿ ಲಭಿಸಿದೆ.
ಭಾನುವಾರ ತಡರಾತ್ರಿ ಓಲ್ಡ್ ಏರ್ ಪೋರ್ಟ್ ರಸ್ತೆಯ ಮಣಿಪಾಲ ಆಸ್ಪತ್ರೆಗೆ ಸಿಎಂ ದಾಖಲಾಗಿದ್ದಾರೆ. ರಾತ್ರಿಯಿಡೀ ಮಣಿಪಾಲ ಆಸ್ಪತ್ರೆಯ ವೈದ್ಯರು ಹಲವು ಪರೀಕ್ಷೆ ನಡೆಸಿದ್ದಾರೆ. ಇಸಿಜಿ, ಸಿ.ಟಿ.ಸ್ಕ್ಯಾನ್, ರಕ್ತ ಪರೀಕ್ಷೆ ಮಾಡಲಾಗಿದೆ. ಹೀಗಾಗಿ ಅವರ ಆರೋಗ್ಯದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.
ಇಂದು ಸಂಜೆ ವೇಳೆಗೆ ಬಿಎಸ್ ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ಬಳಿಕ ಹೋಂ ಕ್ವಾರಂಟೈನ್ ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
- Advertisement -