- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಇಂದಿನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಸಿಎಂ ಬಿಎಸ್ ವೈ ನಾಳೆ ಮಣಿಪಾಲ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಕಳೆದ 9 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಇಂದಿನ ಕೊರೊನಾ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಬಂದಿದೆ. ಸದ್ಯ ಸಿಎಂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
- Advertisement -