Saturday, June 28, 2025
spot_imgspot_img
spot_imgspot_img

ನವೆಂಬರ್ 17 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭ

- Advertisement -
- Advertisement -

ಬೆಂಗಳೂರು (ಅ.23): ನವೆಂಬರ್ 17 ರಿಂದ ರಾಜ್ಯದಲ್ಲಿ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ.
ಮೊದಲ ಹಂತದಲ್ಲಿ ಪದವಿ, ಇಂಜಿನಿಯರಿಂಗ್, ಡಿಪ್ಲೋಮ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಡಿಸಿಎಂ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಯುಜಿಸಿ ಗೈಡ್ಲೈನ್ಸ್ ಪ್ರಕಾರ ಕಾಲೇಜು ಆರಂಭಿಸುತ್ತಿದ್ದೇವೆ ಎಂದರು. ಪ್ರತಿ ಕಾಲೇಜಿನಲ್ಲೂ ಟಾಸ್ಕ್ ಫೋರ್ಸ್ ಇರುತ್ತದೆ ಎಂದರು.ಕಳೆದ ಏಳು ತಿಂಗಳ ಬಳಿಕ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಮಾರ್ಚ್ 22ರಂದು ಲಾಕ್ಡೌನ್ ಘೋಷಣೆಯಾದ ಬಳಿಕ ಶಾಲೆ, ಕಾಲೇಜುಗಳು ಸ್ಥಗಿತಗೊಂಡಿದ್ದವು.

ಆನಂತರ ಕೆಲವು ವಿಭಾಗದ ಪರೀಕ್ಷೆಗಳನ್ನೂ ಅರ್ಧಕ್ಕೆ ಕಡಿತಗೊಳಿಸಲಾಗಿತ್ತು. ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಿಗೆ ಕಳೆದ ತಿಂಗಳಷ್ಟೇ ಅಂತಿಮ ಪರೀಕ್ಷೆಗಳನ್ನು ಪೂರ್ತಿ ಮಾಡಲಾಗಿತ್ತು. ಈಗ ಕಾಲೇಜುಗಳಲ್ಲಿ ಅಡ್ಮಿಶನ್ ಪ್ರಕ್ರಿಯೆ ನಡೆಯುತ್ತಿದ್ದು. ಮೊದಲಿಗೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವೆಂಬರ್ ತಿಂಗಳಾಂತ್ಯಕ್ಕೆ ಡಿಸೆಂಬರ್ ನಲ್ಲಿ ಪಿಯು ಮತ್ತು ಪ್ರೌಢಶಾಲೆ ಆರಂಭಗೊಳ್ಳುವ ಸಾಧ್ಯತೆಯಿದೆ.

- Advertisement -

Related news

error: Content is protected !!