Thursday, May 2, 2024
spot_imgspot_img
spot_imgspot_img

ಬಸ್‌ಗಳ ನಡುವೆ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯ..!

- Advertisement -G L Acharya panikkar
- Advertisement -

ಎರಡು ಕೆಎಸ್‌ಆರ್ ಟಿಸಿ ಬಸ್‌ ಗಳು ಡಿಕ್ಕಿ ಹೊಡೆದ ಪರಿಣಾಮ 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ವಿಜಯಪುರದ ಚಡಚಣ ಪಟ್ಟಣದ ದೇವರನಿಂಬರಗಿ ಕ್ರಾಸ್ ಬಳಿ ನಡೆದಿದೆ.

ಖಾಸಗಿ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಗಳ ಮಧ್ಯೆ ಈ ಅವಘಡ ಸಂಭವಿಸಿದೆ. ಶಾಲಾ ವಾಹನಕ್ಕೆ ಆಗಲಿದ್ದ ಅಪಘಾತ ತಪ್ಪಿಸಲು ಸಾರಿಗೆ ಸಂಸ್ಥೆಯ ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಇದರಿಂದಾಗಿ ಹಿಂದೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಮತ್ತೊಂದು ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ 8 ಜನರ ಗಂಭೀರ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಶಾಲಾ ಬಸ್‌ನಲ್ಲಿದ್ದ ಕೆಲ ಮಕ್ಕಳಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡವರನ್ನು ವಿಜಯಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಉಳಿದ ಗಾಯಾಳುಗಳನ್ನು ಕೂಡಲೇ ಚಡಚಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ತಿಳಿದ ನಂತರ ಚಡಚಣ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!