Monday, June 8, 2026
spot_imgspot_img
spot_imgspot_img

ಸ್ಕೂಟಿ-ಬೊಲೆರೋ ನಡುವೆ ಡಿಕ್ಕಿ; ದಂಪತಿ ಸ್ಥಳದಲ್ಲೇ ಸಾವು..!

- Advertisement -
- Advertisement -

ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ.

ಮೃತ ದಂಪತಿಗಳನ್ನು ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಬೊಲೆರೋ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!