Saturday, June 28, 2025
spot_imgspot_img
spot_imgspot_img

ಎರಡು ಬೈಕ್‍ಗಳ ನಡುವೆ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು..!

- Advertisement -
- Advertisement -

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬದಿ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಟಿ.ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ.

ಮೃತಪಟ್ಟವರನ್ನು ಟಿ.ನರಸೀಪುರದ ಆದಿಬೆಟ್ಟಳ್ಳಿಯ ನಾಗರಾಜು (35) ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!