- Advertisement -
- Advertisement -



ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಇವರು ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024 ಆಯ್ಕೆಯಾಗಿದ್ದಾರೆ.
ಯಕ್ಷಗಾನ ರಂಗದಲ್ಲಿ ಹಾಸ್ಯ ಕಲಾವಿದರಾಗಿ ಹಲವಾರು ಪಾತ್ರಗಳಲ್ಲಿ ಮಿಂಚುತ್ತಿರುವ ಯುವ ಕಲಾವಿದ ದಿನೇಶ್ ಕೋಡಪದವು ಇವರ ಯಕ್ಷ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಜೂನ್ 6 ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
- Advertisement -