- Advertisement -
- Advertisement -
ಬೆಂಗಳೂರು: ಬಿಬಿಎಂಪಿ ಕಮಿಷನರ್ ಬಿ.ಎಚ್ ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರ ಸ್ಥಾನಕ್ಕೆ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಮಂಜುನಾಥ್ ಪ್ರಸಾದ್ ಈ ಹಿಂದೆಯೂ ಬಿಬಿಎಂಪಿ ಆಯುಕ್ತರಾಗಿದ್ದರು. ಇದಲ್ಲದೇ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಪತ್ತು ನಿರ್ವಹಣಾ ಭೂಮಿ , ಯುಪಿಒಆರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಈ ನಡುವೆ ಬಿಬಿಎಂಪಿ ಕಮಿಷನರ್ ಹುದ್ದೆಯನ್ನೂ ಅವರಿಗೆ ನೀಡಲಾಗಿದೆ. ಹೀಗಾಗಿ ಮೂರು ಜವಾಬ್ದಾರಿ ಹೊತ್ತಿರುವ ಇವರು ಕೊರೊನಾ ಪರಿಸ್ಥಿತಿಯನ್ನು ಹೇಗೆ ನಿರ್ವಹಣೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
- Advertisement -