Sunday, July 26, 2026
spot_imgspot_img
spot_imgspot_img

ಮೀನುಗಾರಿಕಾ ಬೋಟ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮಂಜೂರಾತಿ ಪತ್ರದ ವಿತರಣೆ.

- Advertisement -
- Advertisement -

ಮಂಗಳೂರು: ಮಂಗಳೂರು ಮೀನುಗಾರಿಕಾ ಬೋಟ್ ದುರಂತದಲ್ಲಿ ಮೃತಪಟ್ಟ 6 ಸಂತ್ರಸ್ತ ಕುಟುಂಬಗಳಿಗೆ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಲಾ 6 ಲಕ್ಷ ರೂಪಾಯಿ ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ವಿತರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು ನಡೆಯಬಾರದ ದುರ್ಘಟನೆ ನಡೆದಿದ್ದು, ತೀವ್ರ ನೋವು ತಂದಿದೆ. ಶೋಧ ನಡೆಸುವ ಕಾರ್ಯ ಹಾಗೂ ಪರಿಹಾರ ನೀಡುವ ವಿಚಾರದಲ್ಲಿ ಸರ್ಕಾರ ತಕ್ಷಣವೇ ಸ್ಪಂದಿಸಿದೆ. ನಿಯಮದ ಪ್ರಕಾರ ಸಂತ್ರಸ್ತ ಕುಟುಂಬಕ್ಕೆ ತಲಾ 6 ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದು, ಹೆಚ್ಚುವರಿ ಪರಿಹಾರ ನೀಡುವಂತೆ ಮೀನುಗಾರ ಪ್ರಮುಖರು ಒತ್ತಾಯಿಸಿದ್ದಾರೆ. ಅದರಂತೆ ಸಂಸದರು ಹಾಗೂ ಶಾಸಕರ ನಿಯೋಗ ವಾರದೊಳಗೆ ಮುಖ್ಯಮಂತ್ರಿ ಯವರನ್ನು ಭೇಟಿ ಮಾಡಿ ಹೆಚ್ಚುವರಿ ತಲಾ 4 ಲಕ್ಷ ರೂಪಾಯಿ ಸೇರಿಸಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

- Advertisement -

Related news

error: Content is protected !!