



ಕನ್ಯಾನ, ಮಾ. 14: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ಯಾನದ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಅವಕಾಶಗಳ ಕುರಿತ ಕಾರ್ಯಾಗಾರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಕಾಲೇಜಿನ ನಿಕಟಪೂರ್ವ ಉಪನ್ಯಾಸಕರಾದ ಕಿರಣ್ ಪ್ರಸಾದ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗ ಅವಕಾಶಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡುತ್ತಾ, ‘ನಮ್ಮ ಬದುಕಿನ ಪಥವನ್ನು ರೂಪಿಸಬೇಕಾದವರು ನಾವೇ. ಆದ್ದರಿಂದ, ನಮಗೆ ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಹೇಳಿದರು.
ಈ ಕಾರ್ಯಾಗಾರದಲ್ಲಿ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸವಿತಾ, ವಾಣಿಜ್ಯಶಾಸ್ತ್ರ ವಿಭಾಗದ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಚೈತ್ರಾ, ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಖಲೀಲ್ ಇಬ್ರಾಹಿಂ ಸ್ವಾಗತಿಸಿ, ಸ್ನೇಹಾ ಎನ್. ವಂದಿಸಿ, ಶರಣ್ಯ ನಿರೂಪಿಸಿ, ಇಶ್ಮಿತಾ ಮತ್ತು ಬಳಗ ಪ್ರಾರ್ಥಿಸಿದರು.








