




ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ, ಜನಜಾಗ್ರತಿ ವೇದಿಕೆ ವಿಟ್ಲ, ವತಿಯಿಂದ ತಾಲೂಕಿನ 15 ಶಾಲಾ ಕಾಲೇಜುಗಳಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಿ, ಸಮಾರೋಪ ಕಾರ್ಯಕ್ರಮವನ್ನು ಪ್ರಗತಿಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಿಟ್ಲ ವಲಯದ ಸಹಯೋಗದಲ್ಲಿ ವಿಠಲ ಪದವಿಪೂರ್ವ ಕಾಲೇಜು ವಿಟ್ಲದಲ್ಲಿ ಮಂಗಳವಾರ ನಡೆಯಿತು.
ವಿಠಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಮುಳಿಯ ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷರುಗಳಾದ ಕೈಯೂರ್ ನಾರಾಯಣ ಭಟ್, ಬಾಲಕೃಷ್ಣ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಸುರೇಶ ಗೌಡ, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಅಣ್ಣಪ್ಪ ಶಾಸ್ತರ, ಶ್ರೀಮತಿ ರೇಣುಕಾ ಕಣಿಯೂರ್ ಉಪಸ್ಥಿತರಿದ್ದರು.
ಉಪನ್ಯಾಸಕ ಅಣ್ಣಪ್ಪ ಸರ್ ಸ್ವಾಗತಿಸಿ, ಉಪನ್ಯಾಸಕಿ ಶ್ರೀಮತಿ ಸವಿತ ವಂದಿಸಿ, ವಿಟ್ಲ ವಲಯ ಮೇಲ್ವಿಚಾರಕ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಲಯದ ಸೇವಾಪ್ರತಿನಿಧಿ ಮತ್ತು ವಿಪತ್ತು ಸದಸ್ಯರು ಸಹಕರಿಸಿದರು.








