Tuesday, June 16, 2026
spot_imgspot_img
spot_imgspot_img

ಮತದಾರರಲ್ಲಿ ಗೊಂದಲ ಸೃಷ್ಟಿಯಾಗಿದೆ, ಪಕ್ಷದಿಂದ ರಘುಪತಿ ಭಟ್ ಉಚ್ಚಾಟನೆಗೆ ತೀವ್ರ ಆಗ್ರಹ: ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್

- Advertisement -
- Advertisement -

ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್‌ ವಂಚಿತರಾಗಿರುವ ಮಾಜಿ ಶಾಸಕ ರಘುಪತಿ ಭಟ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.

ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!