- Advertisement -
- Advertisement -
ರಾಜ್ಯದಲ್ಲಿ ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರು ಉಪ್ಪಿನಂಗಡಿ ಪ್ರಮುಖ ರಸ್ತೆಯುದ್ದಕ್ಕೂ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.
ಉಪ್ಪಿನಂಗಡಿ ಬಸ್‌ನಿಲ್ದಾಣದಿಂದ ಗಾಂಧೀ ಪಾರ್ಕ್ ವರೆಗೆ ಸಾಗಿ ಬಂದ ರೋಡ್ ಶೋ ದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬ್ಲಾಕ್ ಅಧ್ಯಕ್ಷ ರಾಜರಾಂ ಕೆ.ಬಿ, ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
- Advertisement -