Sunday, June 14, 2026
spot_imgspot_img
spot_imgspot_img

ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೇಸ್‌ ದೂರು, ಕಾಂಗ್ರೆಸ್ ನಡೆಗೆ ಹೆಚ್‌ಡಿಕೆ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆಸಿದ ಸೈಟು ಹಂಚಿಕೆ ಮಾಡಿದ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ಪೊಲೀಸ್ ಕಂಪ್ಲೇಂಟ್ ಕೊಟ್ಟು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಮೈಸೂರು ನಗರಾಧ್ಯಕ್ಷ ಆರ್.ಮೂರ್ತಿ ಅವರು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್‌ಗೆ ದೂರು ನೀಡಿದ್ದು, ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡಿರುವ RTI ಕಾರ್ಯಕರ್ತರಾದ ಗಂಗರಾಜು, ಸ್ನೇಹಮಯಿ ಕೃಷ್ಣ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, ” ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ! ” ಎಂದು ಹರಿಹಾಯ್ದಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ, ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ. ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

- Advertisement -

Related news

error: Content is protected !!