Wednesday, May 22, 2024
spot_imgspot_img
spot_imgspot_img

ವಿಟ್ಲ: ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ; ಹಿಂದೂ ಸಮಾಜವನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ- ಸಂಸದ ನಳೀನ್ ಕುಮಾರ್ ಕಟೀಲ್

- Advertisement -G L Acharya panikkar
- Advertisement -

ವಿಟ್ಲ: ವಿಟ್ಲಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ರವರು ವಿಟ್ಲದ ನಿರೀಕ್ಷಣಾ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ. ಆ ಕಾರಣಕ್ಕಾಗಿ ಗಲಭೆಗಳು ಸೃಷ್ಟಿಯಾಗುತ್ತಿದೆ. ಈ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಹಿಂದೂ ಸಮಾಜವನ್ನು ಸಂರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದ್ದು, ಹಿಂದೂ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಸಿದ್ದರಾಮಣ್ಣನ ಆಡಳಿತ ಹಿಂದೂ ವಿರೋಧಿ ಆಡಳಿತವಾಗಿದೆ ಎಂದು ಹೇಳಿದರು.

ಮತಾಂಧ ಶಕ್ತಿಗಳು ರಾಜ್ಯದಲ್ಲಿ ಅಶಾಂತಿಯ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ನ ಹೆಸರಿನಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ, ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲುತೂರಾಟ ನಡೆಸಿರುವ ಗಂಭೀರ ಪ್ರಕರಣಗಳನ್ನು ನಾವು ಕಂಡಿದ್ದೇವೆ. ಸಿದ್ದರಾಮಣ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ರಾಜ್ಯದಲ್ಲಿ ಯಾವಾಗ ಬರುತ್ತಾ ಅವಾಗ ಗಲಭೆ ಸೃಷ್ಟಿ ಮಾಡುವಂತಹ, ಗಲಭೆ ಕೋರರಿಗೆ ಶಕ್ತಿ ತುಂಬುವ ಕೆಲಸ ಈ ಸರಕಾರ ಮಾಡುತ್ತಿದೆ.

ಹರ್ಷಾ, ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಎನ್.ಐ.ಎ ತನಿಖೆಗಳು ತೀವ್ರಗೊಳಿಸಿದ ಮೇಲೆ ಶಿವಮೊಗ್ಗದ ತೀರ್ಥಹಳ್ಳಿ ಭಯೋತ್ಪಾದನಾ ಕೇಂದ್ರವಾಗುತ್ತಿದೆ ಎನ್ನುವುದನ್ನು ಎನ್.ಐ.ಎ. ಹೇಳಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ನಲ್ಲಿ ತೀರ್ಥಹಳ್ಳಿಯ ಭಯೋತ್ಪಾದಕರ ಚಟುವಟಿಕೆಗಳು ಸ್ಪಷ್ಟವಾಗಿ ಗೋಚರಿಸಿದೆ. ಡಿಜೆಹಳ್ಳಿ, ಕೆಜೆಹಳ್ಳಿ ಪ್ರಕರಣಗಳಿರಬಹುದು ಆಗ ಆರೋಪಿಗಳನ್ನ ನಮ್ಮ ಸರಕಾರ ಬಂಧನ ಮಾಡಿತ್ತು. ಅವರನ್ನು ಬಿಡುಗಡೆ ಮಾಡುವ ಕೆಲಸವನ್ನು ಕಾಂಗ್ರೇಸ್‌ ಸರಕಾರ ಮಾಡ್ತಿದೆ. ಕೋಲಾರದಲ್ಲಿ ನಡೆದ ಘಟನೆಯ ಬಗ್ಗೆ ಕಠೋರ ಕ್ರಮ ಕೈಗೊಳ್ಳದೆ ಇರುವುದರಿಂದ ಆತಂಕವಾದಿಗಳು ನಿರಾತಂಕವಾಗಿ ಈ ರಾಜ್ಯದಲ್ಲಿ ಮರೆಯುತ್ತಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿವಸ ಅವರ ವಿಜಯೋತ್ಸವದ ಹೆಸರಿನಲ್ಲಿ ಮೆರವಣಿಗೆ ನಡೆದಂತಹ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಹಾಕಲಾಗಿತ್ತು, ಪಾಕಿಸ್ತಾನದ ಧ್ವಜವನ್ನು ಹಿಡಿದು ಪ್ರದರ್ಶಿಸುವ ಕೆಲಸವಾಗಿದೆ. ರಾಷ್ಟ್ರ ವಿರೋಧಿ ಕೃತ್ಯ ಮಾಡಿದವರನ್ನು ಬಂಧಿಸುವ ಶಕ್ತಿ ಕಾಂಗ್ರೆಸ್ ಸರಕಾರಕ್ಕಿಲ್ಲ. ತುಷ್ಟೀಕರಣದ ನೀತಿಯಿಂದ ಅವರನ್ನು ಬಿಟ್ಟರು ಆ ಕಾರಣಕ್ಕಾಗಿ ಇಡೀ ರಾಜ್ಯದಲ್ಲಿ ಗಲಭೆ ಸೃಷ್ಠಿಸುವ ಹುನ್ನಾರ ನಡೆಯುತ್ತಿದೆ. ಶಿವಮೊಗ್ಗದಲ್ಲಿ ಗಲಭೆ ನಡೆದ ಪ್ರದೇಶಗಳಿಗೆ ನಮ್ಮ ತಂಡ ತೆರಳಿ ಪರಿಶೀಲನೆ ನಡೆಸಲಿದೆ. ಶಿವಮೊಗ್ಗ ಹಾಗೂ ಕೋಲಾರದ ಗಲಭೆಯ ಹಿಂದಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕೂಡಲೇ ತನಿಖೆಯನ್ನು ಎನ್.ಐ.ಎ. ಗೆ ಒಪ್ಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು, ಪ್ರಮುಖರಾದ ಮಾಧವ ಮಾವೆ, ರವೀಶ್ ಶೆಟ್ಟಿ ಕರ್ಕಳ, ಹರಿಪ್ರಸಾದ್ ಯಾದವ್, ರಾಮ್ ದಾಸ್ ಶೆನೈ, ಮೋಹನದಾಸ್ ಉಕ್ಕುಡ, ವೀರಪ್ಪ ಗೌಡ ರಾಯರಬೆಟ್ಟು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅರುಣ್ ವಿಟ್ಲ, ಹರೀಶ್ ಸಿ.ಹೆಚ್., ಜಯಂತ ಸಿ.ಹೆಚ್, ವಿಟ್ಲ ಪಡ್ನೂರು ಗ್ರಾ.ಪಂ ಅಧ್ಯಕ್ಷ ಜಯಂತ ಪಿ. ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!