



ಮೈಸೂರು: ಕಾಂಗ್ರೆಸ್ ನಾಯಕಿಯೊಬ್ಬರನ್ನು ತನ್ನ ಪತಿಯೇ ಭೀಕರವಾಗಿ ಹತ್ಯೆ ಗೈದು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ.
ಹತ್ಯೆಗೈದ ವ್ಯಕ್ತಿ ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್ ಹಾಗೂ ಹತ್ಯೆಯಾದ ಕಾಂಗ್ರೆಸ್ ನಾಯಕಿಯನ್ನು ನಂದೀಶ್ ಅವರ ಪತ್ನಿ ವಿದ್ಯಾ ಎಂದು ಗುರುತಿಸಲಾಗಿದೆ.
ಹತ್ಯೆಗೊಳಗಾದ ವಿದ್ಯಾ ಕಾಂಗ್ರೇಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಕೆಲವೊಂದು ಚಲನಚಿತ್ರಗಳಲ್ಲಿ ಸಹನಟಿಯಾಗಿಯೂ ಕಾಣಿಸಿಕೊಂಡವರು. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ.
ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ ಆರೋಪಿ ನಂದೀಶ್, ಪತ್ನಿಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ನಿನ್ನೆ ತಡರಾತ್ರಿ ಬನ್ನೂರಿನ ತುರಗನೂರಿನಲ್ಲಿದ್ದ ಪತಿ ಮನೆಗೆ ವಿದ್ಯಾ ತೆರಳಿದ್ದಾರೆ. ದಂಪತಿ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪತ್ನಿ ತಲೆಗೆ ನಂದೀಶ್ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಸೀಮಾ ಲಾಟ್ಕರ್, ಎಎಸ್ಪಿ ನಂದಿನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯಗೈದ ಪತಿ ನಂದೀಶ್ ಸೆರೆಗೆ ಬನ್ನೂರು ಪೊಲೀಸರು ಬಲೆ ಬೀಸಿದ್ದಾರೆ.








