Wednesday, July 29, 2026
spot_imgspot_img
spot_imgspot_img

ಪುಣಚ ಗ್ರಾಮ ಪಂಚಾಯತ್ ನ ನಿಕಟಪೂರ್ವ ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹೇಶ್ ಶೆಟ್ಟಿ ಬೈಲುಗುತ್ತು ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

- Advertisement -
- Advertisement -

ವಿಟ್ಲ: ಪುಣಚ ಗ್ರಾಮ ಪಂಚಾಯತ್’ನ ನಿಕಟಪೂರ್ವ ಉಪಾಧ್ಯಕ್ಷರಾಗಿದ್ದ ಮಹೇಶ್ ಶೆಟ್ಟಿ ಬೈಲುಗುತ್ತು, ಕುಂಞಣ್ಣ ರೈ, ಸುಂದರ ಪೂಜಾರಿ ಮತ್ತು ಇತರ ಅಪಾರ ಬೆಂಬಲಿಗರು ಎಸ್. ಆರ್ ರಂಗಮೂರ್ತಿಯವರ ಮನೆಯಲ್ಲಿ ಬಿಜೆಪಿ’ಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸುದರ್ಶನ ಮೂಡಬಿದಿರೆ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಮಂಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿಗಳಾದ ಗೋಪಾಲಕೃಷ್ಣ ಹೇರಳೆ, ಪುಣಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ನಿಕಟ ಪೂರ್ವ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಮಹಾಶಕ್ತಿ ಕೇಂದ್ರದ ಪ್ರಭಾರಿಗಳಾದ ಶಂಭು ಭಟ್, ಶಕ್ತಿ ಕೇಂದ್ರದ ಸಂಚಾಲಕರಾದ ಜಯಂತ ಗೌಡ ಮತ್ತು ಶ್ರೀ ಉದಯ ಭಾಸ್ಕರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಹಿರಿಯರ ಬಲಿದಾನಗಳು ಮತ್ತು ನಮ್ಮಲ್ಲಿನ ರಾಷ್ಟ್ರೀಯ ವಿಚಾರಧಾರೆಗಳಿಂದಾಗಿ ಇಂದು ದೇಶದಲ್ಲಿ ಬಿಜೆಪಿ ಪಕ್ಷವು ಬಲಿಷ್ಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿಯ ವಿಜಯಯಾತ್ರೆ ಪುಣಚದಿಂದಲೇ ಆರಂಭವಾಗಲಿದೆ. ಬಿಜೆಪಿಯ ತತ್ವ ಸಿದ್ದಾಂತಗಳನ್ನು ಒಪ್ಪಿ ಮಹೇಶ್ ಶೆಟ್ಟಿಯವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಕಾಂಗ್ರೆಸ್ಸಿನ ಕುಟುಂಬ ರಾಜಕಾರಣದಿಂದ ಬೇಸತ್ತು ಅನೇಕ ಕಾಂಗ್ರೆಸ್ಸಿನ ಕಾರ್ಯಕರ್ತರು, ನಾಯಕರು ಮೋದಿಜೀಯ ನಾಯಕತ್ವ ಒಪ್ಪಿ ಅವರ ಕೈ ಬಲಪಡಿಸಲು ಬಿಜೆಪಿ ಸೇರುತ್ತಿದ್ದಾರೆ ಈ ಮೂಲಕ ದೇಶವು ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.

ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿದರು, ಬಿಜೆಪಿ ಪುತ್ತೂರು ಗ್ರಾಮಾಂತರದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನಕಾರ್ಯದರ್ಶಿಯಾದ ಪ್ರವೀಣ್’ರವರು ವಂದಿಸಿದರು, ಜಗದೀಶ್ ಮಾರುಮಾಜಲು ಕಾರ್ಯಕ್ರಮವನ್ನ ನಿರೂಪಣೆ ಮಾಡಿದರು.

- Advertisement -

Related news

error: Content is protected !!