- Advertisement -
- Advertisement -
ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ನ ಎಲ್ಲ ಸಂಸದರ ಜತೆ ಚರ್ಚೆ ನಡೆಸಲು ಇಂದು ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸೋನಿಯಾ ಗಾಂಧಿ ಸಂಸದರ ಜತೆ ಮಾತುಕತೆ ನಡೆಸಲಿದ್ದಾರೆ.
ದೇಶದಲ್ಲಿ ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರದ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಾ ಬಂದಿದೆ. ಹೀಗಾಗಿ ಕೇಂದ್ರದ ವೈಫಲ್ಯಗಳನ್ನು ಎತ್ತಿ ತೋರಿಸುವ ಸಲುವಾಗಿ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಇನ್ನು ಈ ಸಭೆಯಲ್ಲಿ ಕೊರೊನಾ ಸೋಂಕು ಹೆಚ್ಚಳ, ಚೀನಾ-ಭಾರತದ ಗಡಿ ಸಂಘರ್ಷ, ದೇಶದ ಆರ್ಥಿಕತೆ ಕುಸಿತ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರ ವಿಪಕ್ಷ ನಾಯಕರನ್ನು ಗಣನೆಗೆ ತೆಗೆದುಕೊಳ್ಳದೆ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೈ ನಾಯಕರು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದ ವಿರುದ್ಧ ರಣತಂತ್ರ ಹೆಣೆಯಲು ಕಾಂಗ್ರೆಸ್ ಸಿದ್ಧತೆ ನಡೆಸಲು ಈ ಸಭೆ ಕರೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
- Advertisement -