- Advertisement -
- Advertisement -
ವಿಟ್ಲ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಕನ್ಯಾನ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕನ್ಯಾನ ಗ್ರಾಮ ಪಂಚಾಯಿತಿ ಸದಸ್ಯ, ಅಬ್ದುಲ್ ಮಜೀದ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಆಯ್ಕೆ ಮಾಡಲಾಗಿದೆ.
ಮಜೀದ್ ಅವರು ಕನ್ಯಾನ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ತಕ್ಷಣವೇ ಅಧಿಕಾರ ವಹಿಸಿಕೊಂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆಯಲ್ಲಿ ಮತ್ತು ಬಲವರ್ಧನೆಗೆ ಕಾರ್ಯ ನಿರ್ವಹಿಸುವಂತೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
- Advertisement -