Friday, May 3, 2024
spot_imgspot_img
spot_imgspot_img

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಈಗಾಗಲೇ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇದೀಗ ಕಾಂಗ್ರೆಸ್‌ ಕೂಡ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ 60 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿತ್ತು.

ಸರಣಿ ಸಭೆಗಳ ನಂತರ ಅಂತಿಮವಾಗಿ ಇಂದು (ಮಾರ್ಚ್ 08) ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್, ಅಜಯ್ ಮಕೇನ್, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್‌ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

- Advertisement -

Related news

error: Content is protected !!