Sunday, June 29, 2025
spot_imgspot_img
spot_imgspot_img

ಕಾಂಗ್ರೆಸ್ ವಕ್ತಾರರಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇಮಕ

- Advertisement -
- Advertisement -

ಶಿವಮೊಗ್ಗ : ಮಾಜಿ ಸಚಿವ ಕಾಂಗ್ರೆಸ್ ನಾಯಕ ಕಿಮ್ಮನೆ ರತ್ನಾಕರ್ರನ್ನು ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಿರುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.

ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕಮಾಡಲಾಗಿದೆ ಎಂದು ಡಿ. ಕೆ. ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಈ ಜವಾಬ್ದಾರಿಯನ್ನು ನೀವು ವಹಿಸಿಕೊಂಡು ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ, ಸೂಚನೆ ಮತ್ತು ಮಾರ್ಗದರ್ಶನಗಳ ಮೇಲೆ ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು ಎಂದು ಆದೇಶದಲ್ಲಿ ಕೋರಲಾಗಿದೆ.

- Advertisement -

Related news

error: Content is protected !!