Sunday, May 19, 2024
spot_imgspot_img
spot_imgspot_img

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ; 80ಕ್ಕೂ ಹೆಚ್ಚು ಜನರು ಅಸ್ವಸ್ಥ..!

- Advertisement -G L Acharya panikkar
- Advertisement -

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ

ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚನ್ನಪಟ್ಟಣದ ವಧು ಮತ್ತು ಮಾಗಡಿಯ ವರನ ವಿವಾಹ ಸಮಾರಂಭ ಮಿಲನ್ ಶಾದಿ ಮಹಲ್ ನಲ್ಲಿ ನಡೆಯುತಿತ್ತು. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನವರು ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಐಸ್​ ಕ್ರೀಂ ತಿಂದು ಆಸ್ವಸ್ಥಗೊಂಡವರಲ್ಲಿ 40 ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥಗೊಂಡವರ ಕುಟುಂಬಸ್ಥರು ಆಗಮಿಸಿದ್ದಾರೆ. ಎಲ್ಲರಿಗೂ ಡ್ರಿಪ್ಸ್ ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!