ಪುತ್ತೂರು : ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಬಕ ಗ್ರಾಮದ ನೆಹರುನಗರ ಎಂಬಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ.
ಪಡೂರು ಗ್ರಾಮದ ನಿವಾಸಿ ಮಹೇಶ್ (26) ಹಾಗೂ ಕಬಕ ಗ್ರಾಮದ ನಿವಾಸಿ ಪ್ರಕಾಶ (31) ಎಂಬವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಭಾನುವಾರ ಮದ್ಯಾಹ್ನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸೈ ಆಂಜನೇಯ ರೆಡ್ಡಿ ಜಿ ವಿ ಅವರು ಸಿಬ್ಬಂದಿಗಳೂ ಸ್ಥಳಕ್ಕೆ ತೆರಳಿ, ಸ್ಥಳದಲ್ಲಿದ್ದ ಈ ಇಬ್ಬರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಈ ಪೈಕಿ ಪ್ರಕಾಶ ಎಂಬಾತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 69/2024 ಕಲಂ: 27(b) NDPS ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.