- Advertisement -
- Advertisement -




ವಿಜಯನಗರ: ಅಡುಗೆ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಸ್ಫೋಟದ ರಭಸಕ್ಕೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಎಂಟು ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಲುಗಳನ್ನು ಚಿಕಿತ್ಸೆಗೆ ಹತ್ತಿರದ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








