- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರ ವೇಗದಲ್ಲಿ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 28,637 ಮಂದಿಗೆ ಸೋಂಕು ತಗುಲಿದೆ. ಹೀಗಾಗಿ ಕೊರೊನಾ ಸೋಂಕಿತರ ಸಂಖ್ಯೆ 8,49,553ಕ್ಕೆ ಏರಿಕೆಯಾಗಿದೆ.
ಆರೋಗ್ಯ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ಶನಿವಾರ ಒಂದೇ ದಿನ 551 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 22,674ಕ್ಕೆ ಏರಿಕೆಯಾಗಿದೆ.
ಈವರೆಗೆ ಕೊರೊನಾ ಸೋಂಕಿನಿಂದ 5,34,620 ಮಂದಿ ಗುಣಮುಖರಾಗಿದ್ದು, 2,92,258 ಪ್ರಕರಣಗಳು ಇನ್ನೂ ಸಕ್ರೀಯವಾಗಿದೆ ಎಂದು ತಿಳಿಸಿದೆ.
- Advertisement -