- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ವಿಶ್ವದಾದ್ಯಂತ ಹೆಮ್ಮಾರಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸುತ್ತಲೇ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜನರು ಕೋವಿಡ್ ನಿಂದ ರಕ್ಷಿಸಿಕೊಳ್ಳಲು ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಪಾಲಿಸುತ್ತಿದ್ದಾರೆ. ಆದ್ರೆ ಕೊರೊನಾದಿಂದ ರಕ್ಷಿಸಿಕೊಳ್ಳಲು ಕೋವಿಡ್ ಕೊಡೆ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.


ಉದ್ಯಮಿ ಹರ್ಷ ಗೋಯೆಂಕಾ ಅವರು, ಕೋವಿಡ್ ಕೊಡೆ ಬಳಕೆಯ ವಿಡಿಯೋವೊಂದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 12 ಸೆಕೆಂಡ್ ಗಳಿರುವ ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಕೊಡೆ ಹಿಡಿದುಕೊಂಡು ನಡೆದುಕೊಂಡು ಬರುತ್ತಿರುವಾಗ ಆತನ ಎದುರುಗಡೆಯಿಂದ ಬಂದ ವ್ಯಕ್ತಿ ಜೋರಾಗಿ ಸೀನುತ್ತಾನೆ. ತಕ್ಷಣ ವ್ಯಕ್ತಿಯ ಕೈಯಲ್ಲಿದ್ದ ಕೊಡೆಯಿಂದ ಪ್ಲಾಸ್ಲಿಕ್ ಪರದೆಯೊಂದು ಹೊರಬಂದು ರಕ್ಷಣೆ ನೀಡುತ್ತದೆ. ಇನ್ನು ಕೋವಿಡ್ ಕೊಡೆಯ ಐಡಿಯಾ ಜನರಲ್ಲಿ ಕುತೂಹಲ ಕೆರಳಿಸಿದೆ.

- Advertisement -