Monday, May 6, 2024
spot_imgspot_img
spot_imgspot_img

ಮೂರನೇ ಅಲೆ ಆತಂಕ; ಕಳೆದ 24 ಗಂಟೆಯಲ್ಲಿ 44,643 ಹೊಸ ಪ್ರಕರಣ ಪತ್ತೆ!

- Advertisement -G L Acharya panikkar
- Advertisement -

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಮೂರನೇ ಅಲೆ ಆತಂಕ ಇನ್ನಷ್ಟು ಹೆಚ್ಚಿದಂತಾಗಿದೆ. ಕಳೆದ 24 ಗಂಟೆಯಲ್ಲಿ 44,643 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಯಲ್ಲಿ 464 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 426754 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 414159 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 41096 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31015844 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ದೇಶದಲ್ಲಿ 16,40,287 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 57,97,808 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 49,53,27,595 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!