ಬೆಂಗಳೂರು:- ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟದಿಂದ ರಾಜ್ಯದ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು 4 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ವೈರಸ್ ಸೋಂಕು ರಾಜಧಾನಿ ಬೆಂಗಳೂರಲ್ಲಿ ಮರಣ ಮೃದಂಗವನ್ನೇ ಬಾರಿಸುತ್ತಿದೆ. ಒಂದೆಡೆ ಮಹಾಮಾರಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ರೆ, ಇಂದು 19 ಜನ ಬಲಿಯಾಗಿದ್ದಾರೆ.ಇನ್ನೊಂದೆಡೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. ಇಂದು ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 889 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 90 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಅಂತರರಾಷ್ಟ್ರೀಯ ಪ್ರಯಾಣ ದಿಂದ , SARI, ILI ಸೇರಿದಂತೆ ಪ್ರಾಥಮಿಕ ಸಂಪರ್ಕದಿಂದಲೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು ಒಂದು ಮಂದಿ ಬಲಿಯಾಗಿದ್ದರೆ.ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ.


