Wednesday, June 29, 2022
spot_imgspot_img
spot_imgspot_img

ಕೊರೊನಾ ರಣಕೇಕೆ :-ದಕ್ಷಿಣ ಕನ್ನಡದಲ್ಲಿ 153 , ಉಡುಪಿ 126 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 4752 ಮಂದಿಗೆ ಸೋಂಕು..!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 4752 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 98 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 139571 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 62500 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1497 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 27 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 2693 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 36290 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 153 ಮಂದಿಗೆ ಸೋಂಕು ತಗುಲಿದೆ. 7 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 124 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು, ಇಲ್ಲಿಯವರೆಗೆ 2854 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3148 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 126 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4799 ಆಗಿದ್ದು ,ಇಲ್ಲಿಯವರೆಗೆ 2606 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2035 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!