Saturday, April 20, 2024
spot_imgspot_img
spot_imgspot_img

ರಾಜ್ಯದಲ್ಲಿಂದು ಕೊರೊನಾ ಆರ್ಭಟ* -ದಕ್ಷಿಣ ಕನ್ನಡದಲ್ಲಿ 225 , ಉಡುಪಿ 170 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 6259 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6259 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 110 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 145830 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ    ಈವರೆಗೆ 69272 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2035 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 30 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 4274 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 34021 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 225 ಮಂದಿಗೆ ಸೋಂಕು ತಗುಲಿದೆ. 4 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 73 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 6618 ಆಗಿದ್ದು, ಇಲ್ಲಿಯವರೆಗೆ 2927 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.3138 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 170 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4969 ಆಗಿದ್ದು ,ಇಲ್ಲಿಯವರೆಗೆ 2889 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2038 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!