Friday, April 26, 2024
spot_imgspot_img
spot_imgspot_img

ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ. ಒಂದೇ ದಿನ 5324 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ರಾಜ್ಯದಲ್ಲಿ ಈವರೆಗೆ ಒಟ್ಟು 1953 ಕೊರೊನಾ ಸೋಂಕಿಗೆ ಬಲಿ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5324 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 75 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ  101465 ಕ್ಕೆ ಏರಿಕೆಯಾಗಿದೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 1470 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 26 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 784 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 33816 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:– ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ 119 ಮಂದಿಗೆ ಸೋಂಕು ತಗುಲಿದೆ. 8 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 80 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 4930 ಆಗಿದ್ದು, ಇಲ್ಲಿಯವರೆಗೆ 2297 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2502 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!