Tuesday, April 16, 2024
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ 204 , ಉಡುಪಿ 213 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಇಂದು 5483 ಮಂದಿಗೆ ಸೋಂಕು..!*

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 5483 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ, 84 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 124115 ಕ್ಕೆಏರಿಕೆಯಾಗಿದೆ.ರಾಜ್ಯದಲ್ಲಿ ಈವರೆಗೆ 49788 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 2220 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 20 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 1113 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 37618 ಮಂದಿಯಲ್ಲಿ  ಪತ್ತೆಯಾಗಿದೆ.

ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 204 ಮಂದಿಗೆ ಸೋಂಕು ತಗುಲಿದೆ. 10 ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ. 70 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 5708 ಆಗಿದ್ದು, ಇಲ್ಲಿಯವರೆಗೆ 2626 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.2949 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 213 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 4355 ಆಗಿದ್ದು ,ಇಲ್ಲಿಯವರೆಗೆ 2428 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1898 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!