Saturday, October 12, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾ ಮಹಾಸುನಾಮಿ.!300ಕ್ಕೂ ಹೆಚ್ಚು ಪ್ರಕರಣ ಸಾಧ್ಯತೆ.?

- Advertisement -
- Advertisement -

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಈ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗಲಿದೆ ಎನ್ನಲಾಗಿದ್ದು, ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದೃಢವಾಗುವ ಸಾಧ್ಯತೆಯಿದೆ.ನಿನ್ನೆ (ಗುರುವಾರ) 238 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 300 ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.ಕೆಲವು ಕೊರೊನಾ ಸೊಂಕಿನ ಸಂಪರ್ಕವೇ ಪತ್ತೆಯಾಗದ ಪ್ರಕರಣ ಜಾಸ್ತಿ ಹೆಚ್ಚಳವಾಗುತ್ತಿದೆ. ಪ್ರಾಥಮಿಕ ಸಂಪರ್ಕದಿಂದಲೇ ಹಲವರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇದರೊಂದಿಗೆ ILE ಮತ್ತು SARI ಪ್ರಕರಣಗಳಲ್ಲೂ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2763 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 63 ಮಂದಿ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಸದ್ಯ ಅತೀ ಹೆಚ್ಚು ಸೋಂಕಿತರಿರುವ ಜಿಲ್ಲೆಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗುತ್ತಿರುವ ಸಾಧ್ಯತೆ ಗೋಚರಿಸುತ್ತಿದೆ.

- Advertisement -

Related news

error: Content is protected !!