Wednesday, December 4, 2024
spot_imgspot_img
spot_imgspot_img

ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ! ಒಂದೇ ದಿನ 918 ಮಂದಿಗೆ ಕೊರೊನಾ ವೈರಸ್ ,ಬೆಂಗಳೂರಲ್ಲಿ 596, ದ.ಕ.49 ಮಂದಿಗೆ ಸೋಂಕು.!!!

- Advertisement -
- Advertisement -

ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 918 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದು ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದಾರೆ.

ಇಂದು ರಾಜಧಾನಿಯಲ್ಲಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2531ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಇದುವರೆಗೆ ಬೆಂಗಳೂರಲ್ಲಿ ಕೊರೊನಾ ಮಹಾಮಾರಿ 84 ಮಂದಿ ಬಲಿಯಾಗಿದ್ದಾರೆ.

ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 49 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು.
 ಪ್ರಾಥಮಿಕ ಸಂಪರ್ಕದಿಂದಲೇ ಬರೋಬ್ಬರಿ 22 ಜನರಿಗೆ ‌ಪಾಸಿಟಿವ್,ಅಂತರಾಷ್ಟ್ರೀಯ ಪ್ರಯಾಣದಿಂದ 14 ಜನರಿಗೆ , 4 SARI , 3 ILI, ಸಂಪರ್ಕ ಸಿಗದ 3 ಕೇಸ್ ಪತ್ತೆ . ಕೊರೋನಾ ಪಾಸಿಟಿವ್. ಈ ಮೂಲಕ ಸೋಂಕಿತರ ಸಂಖ್ಯೆ 568ಕ್ಕೆ ಏರಿಕೆಯಾಗಿದೆ.
ಇನ್ನೊಂದೆಡೆ ಉಡುಪಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಇಂದು ಜಿಲ್ಲೆಯಲ್ಲಿ 14 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1139ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!