- Advertisement -
- Advertisement -
ಬೆಂಗಳೂರು:- ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟದಿಂದ ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 503 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು ಹೊಸ ದಾಖಲೆ ಬರೆದಿದ್ದು, 947 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 15242 ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಬರೋಬ್ಬರಿ 20 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 44 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
21 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದಿಂದ,
8 ILI ಪ್ರಕರಣ, 2 SARI 2 ಪ್ರಕರಣ, ಅಂತರ್ ಜಿಲ್ಲಾ ಪ್ರಯಾಣ 3 ದಿಂದ , ಅಂತರ್ ರಾಜ್ಯ ಪ್ರಯಾಣ 2 , ಸಂಪರ್ಕ ಪತ್ತೆಯಾಗದ 4 ಜನರಿಗೆ ಸೋಂಕು, ಹಾಗೂ
ಸೌದಿ ಅರೇಬಿಯಾದಿಂದ ಬಂದ ಒಬ್ಬರಿಗೆ ಸೋಂಕು ಸೋಂಕು ಪತ್ತೆಯಾಗಿದೆ.
- Advertisement -