ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ರಾಜ್ಯದಲ್ಲಿಂದು ಬರೋಬ್ಬರಿ 445 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಬೆಂಗಳೂರಲ್ಲಿಂದು 144 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿಗೆ ತುತ್ತಾದವರ ಸಂಖ್ಯೆ 1935ಕ್ಕೆ ಏರಿಕೆಯಾಗಿದೆ. ಇದುವರೆಗೆ 526 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ರೆ, 1327 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಮಂಗಳೂರು :-ಕರಾವಳಿಯಲ್ಲಿಯೂ ಕೊರೊನಾ ಆರ್ಭಟ ಹೆಚ್ಚುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 33 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ ಬರೋಬ್ಬರಿ 10 ಜನರಿಗೆ ಪಾಸಿಟಿವ್,
ಸೌದಿಯಿಂದ 5, ಕತಾರ್ ನ 6, ದಮಾಮ್ ನ 4 ಜನರಿಗೆ, ಪ ILE ಪ್ರಕರಣ 4, SARI ಪ್ರಕರಣ 2, ಉಡುಪಿ ಪ್ರಯಾಣ ಹಿಸ್ಟರಿ ಹೊಂದಿರೋ ಒಬ್ಬರಿಗೆ, ಹಾಗೂ ಟ್ರಾವೆಲ್ ಹಿಸ್ಟರಿಯೇ ಇಲ್ಲದ ಒಂದು ಪಾಸಿಟಿವ್ ಪತ್ತೆ.ಒಟ್ಟು ಸೋಂಕಿತರ ಸಂಖ್ಯೆ 519 ಕ್ಕೆ ಏರಿಕೆಯನ್ನು ಕಂಡಿದೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದ್ದು, ಇದುವರೆಗೆ ಕೊರೊನಾ ಮಹಾಮಾರಿ 10 ಮಂದಿ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದರೂ ಕೂಡ ದಿನೇ ದಿನೇ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ಇಂದು ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ.