- Advertisement -
- Advertisement -
ವಿಟ್ಲ: ಕೊರೊನಾ ಸೋಂಕಿಗೆ ವಿಟ್ಲ ಸಮೀಪದ ಪುಣಚ ಗ್ರಾಮದ ಅಜ್ಜಿನಡ್ಕ ನಿವಾಸಿ 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಇದರಿಂದ ವಿಟ್ಲ ಭಾಗದಲ್ಲಿ ಕೊರೊನಾ ಸೋಂಕಿಗೆ ಇದು ಎರಡನೇ ಬಲಿಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯನ್ನು ಕೆಲವು ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಚಿಕಿತ್ಸೆ ಸ್ಪಂದಿಸದೇ ಇಂದು ಮೃತಪಟ್ಟಿದ್ದಾರೆ.
ಪರಿಯಾಲ್ತಡ್ಕ ಜುಮಾ ಮಸೀದಿಯಲ್ಲಿ ದಫನ ಕಾರ್ಯಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ತರಬೇತಿ ಪಡೆದ ಪಿ ಎಫ್ ಐ ಕಾರ್ಯಕರ್ತರು ಸಿದ್ಧತೆ ನಡೆಸುತ್ತಿದ್ದಾರೆ.
- Advertisement -