- Advertisement -
- Advertisement -
ವಿಟ್ಲ: ಕೊಳ್ನಾಡು ಗ್ರಾಮದ ಸೆರ್ಕಳ ನಿವಾಸಿ 42 ವರ್ಷದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೆಲವು ಸಮಸ್ಯೆಗಳಿಂದ ಬಳಲುತ್ತಿದ್ದ ಇವರಿಗೆ ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ವರದಿ ಬಂದಿದೆ. ಬಳಿಕ ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಸೆರ್ಕಳ ಮಸೀದಿಯಲ್ಲಿ ದಫನ ಮಾಡಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ವ್ಯವಸ್ಥೆ ಕಲ್ಪಿಸಿದರು. ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ, ಗ್ರಾಮ ಕರಣಿಕ ಅನಿಲ್, ಗ್ರಾಮ ಸಹಾಯಕ ಮಹಾಬಲ, ಕೊಳ್ನಾಡು ಗ್ರಾಮ ಪಂಚಾಯಿತಿ ಸಿಬ್ಬಂದಿ ನಾರಾಯಣ, ಮಂಚಿ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಹರಿಣಾಕ್ಷಿ, ಆಶಾ ಕಾರ್ಯಕರ್ತೆ ಶೋಭಾ, ಸಿಬ್ಬಂದಿ ಶರೀಫ್ ಮುಂಜಾಗ್ರತಾ ಕ್ರಮ ಕೈಗೊಂಡರು.
- Advertisement -