ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 49,931 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 14,35,453ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾನುವಾರ ಒಂದೇ ದಿನ 708 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 4,85,114 ಮಂದಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇಂಡಿಯನ್ ಕೌನ್ಸಿಲ್ ಮೆಡಿಕಲ್ ರಿಸರ್ಚ್ ಪ್ರಕಾರ, ಭಾನುವಾರ 5,15,472 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈವರೆಗೆ ದೇಶದಲ್ಲಿ 1,68,06,803 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಮಹಾರಾಷ್ಟ್ರ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಈವರೆಗೆ ಅಲ್ಲಿ 3,75,799 ಮಂದಿಗೆ ಸೋಂಕು ವಕ್ಕರಿಸಿದೆ. ತಮಿಳುನಾಡಿನಲ್ಲಿ 2,13,732 ಮಂದಿಗೆ ಕೊರೊನಾ ಸೋಂಕು ತಗುಲಿದೆ. ದೆಹಲಿಯಲ್ಲಿ 1,30,606 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದೆ.