- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮಿತಿ ಮೀರಿದೆ. ಕಳೆದ 24 ಗಂಟೆಗಳಲ್ಲಿ 48,916 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ಒಂದೇ ದಿನ 757 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹೀಗಾಗಿ ಈವರೆಗೆ ಕೊರೊನಾಗೆ 31,358ಕ್ಕೆ ಏರಿದೆ. ಈವರೆಗೆ ಕೊರೊನಾದಿಂದ 8,49,431 ಮಂದಿ ಗುಣಮುಖರಾಗಿದ್ದಾರೆ. ಆದರೆ 4,56,071 ಪ್ರಕರಣಗಳು ಇನ್ನೂ ಸಕ್ರೀಯವಾಗಿವೆ ಎಂದು ಮಾಹಿತಿ ನೀಡಿದೆ.
ಇನ್ನು ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,57,117ಕ್ಕೆ ಏರಿದೆ. ತಮಿಳುನಾಡಿನಲ್ಲಿ 1,99,749 ಮಂದಿಗೆ ಸೋಂಕು ವಕ್ಕರಿಸಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈವರೆಗೆ 1,28,389 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
- Advertisement -