- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಮತ್ತೊಂದು ಬಲಿ ಪಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷ ವೃದ್ದರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೀಗ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಜೂನ್ 12 ರಂದು ಅನಾರೋಗ್ಯದ ಹಿನ್ನೆಲೆಯಲ್ಲಿ SARI ಕೇಸ್ ಅಡಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷದ ವೃದ್ದರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.

ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.


- Advertisement -