- Advertisement -
- Advertisement -
ಮನೆ ಮನೆಗೆ ತೆರಳಿ ಮೀನು ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ. ಮಂಗಳೂರಿನ ಎಕ್ಕೂರು ನಿವಾಸಿಗೆ ಕೊರೊನಾ ಸೋಂಕು ತಾಗಿರುವುದು ಪರೀಕ್ಷೆಯಲ್ಲಿ ದೃಢವಾಗಿದೆ.
ಎಕ್ಕೂರಿನ 27 ವರ್ಷದ ಯುವಕ ಶೀತದ ಸಮಸ್ಯೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ಸ್ವಯಂ ಪರೀಕ್ಷೆಗೊಳಪಟ್ಟಿದ್ದ. ಈ ವೇಳೆ ಆತನ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿದ್ದು, ಸದ್ಯ ಆತನಿಗೆ ಕೊರೊನಾ ಸೋಂಕು ತಾಗಿರುವುದು ಖಚಿತವಾಗಿದೆ.
ಈತ ಮಂಗಳೂರು ಬಂದರಿಗೆ ತೆರಳಿ ಅಲ್ಲಿಂದ ಮೀನು ತಂದು, ಮನೆಮನೆಗೆ ಮೀನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಈತನ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡುವ ಕಾರ್ಯ ಜಿಲ್ಲಾಡಳಿತ ಮಾಡುತ್ತದೆ.
- Advertisement -