- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಕೋವಿಡ್-19 ಉಪಕರಣ ಖರೀದಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಮೊಹಮ್ಮದ್ ಆರೀಫ್ ಜಮೀಲ್ ಎಂಬುವವರು ನ್ಯಾಯಾಂಗ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಡ್ರಗ್ ಲಾಜಿಸ್ಟಿಕ್ಸ್ ಆ್ಯಂಡ್ ವೇರ್ ಹೌಸ್ ಸೊಸೈಟಿಯಲ್ಲಿ ಖರೀದಿಯಾಗಿರುವ ಕೋವಿಡ್ ಉಪಕರಣ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಿಗಳ ಖರೀದಿ ಬಗ್ಗೆ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸ್ಯಾನಿಟೈಸರ್, ಮಾಸ್ಕ್, ವೆಂಟಿಲೇಟರ್ ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಬೇಕಾದ ಎಲ್ಲ ಉಪಕರಣಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಹಣಕ್ಕೆ ಖರೀದಿ ಮಾಡಲಾಗಿದೆ. ಸುಮಾರು 3 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿರುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಈ ಅರ್ಜಿ ವಿಚಾರಣೆ ಜುಲೈ 30ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.
- Advertisement -