- Advertisement -
- Advertisement -
ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್ ನೀಡದ ಹಿನ್ನಲೆಯಲ್ಲಿ 19 ಖಾಸಗಿ ಆಸ್ಪತ್ರೆಗಳ ಲೈಸನ್ಸ್ ಅನ್ನು ರದ್ದು ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಬೆಡ್ ಗಳನ್ನು ಮೀಸಲಿಡಬೇಕು ಎಂದು ಸರ್ಕಾರ ಆದೇಶ ನೀಡಿತ್ತು. ಆದ್ರೂ ಸರ್ಕಾರದ ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ ಬಿಬಿಎಂಪಿಯ ದಕ್ಷಿಣ ವಲಯ ವ್ಯಾಪ್ತಿಯಲ್ಲಿರುವ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಕಂದಾಯ ಸಚಿವ ಆರ್.ಅಶೋಕ್ ಸೂಚನೆ ಮೇರೆಗೆ ಇಂದು ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳ ತಂಡ ಖಾಸಗಿ ಆಸ್ಪತ್ರೆಗಳ ಮುಂಭಾಗ ಸಾರ್ವಜನಿಕ ಪ್ರಕಟಣೆಯ ಬ್ಯಾನರ್ ಗಳನ್ನು ಅಳವಡಿಸಿ ತಾತ್ಕಾಲಿಕವಾಗಿ ಪರವಾನಗಿಯನ್ನು ರದ್ದು ಮಾಡಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಯಲ್ಲೂ ಆಸ್ಪತ್ರೆಗಳ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ.
- Advertisement -