Thursday, April 25, 2024
spot_imgspot_img
spot_imgspot_img

ಕೊರೊನಾ ಎರಡನೇ ಅಲೆಯ ಭೀತಿ ಮತ್ತು ಸಾರಿಗೆ ನೌಕರರ ಮುಷ್ಕರ: ವಿ.ಟಿ.ಯು ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಆಗ್ರಹ

- Advertisement -G L Acharya panikkar
- Advertisement -

ಹೊಸಪೇಟೆ: ದೇಶಾದ್ಯಂತ ಕೊರೊನಾ ಎರಡನೆಯ ಅಲೆಯಿಂದಾಗಿ ದಿನನಿತ್ಯ ಹೆಚ್ಚುತ್ತಿರುವ ಕೊರೊನಾ ಪೀಡಿತರನ್ನು ನೋಡುವಾಗ, ಕೊರೊನಾ ನಿಯಂತ್ರಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಮತ್ತೆ ಪರಿಸ್ಥಿತಿ ಕೈ ಮೀರುವ ಸಾಧ್ಯತೆಗಳು ಕಂಡುಬರುತ್ತಿದೆ.

ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದ್ದು ಅಪಾಯಕಾರಿ ಬೆಳವಣಿಗೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅಭಿಪ್ರಾಯಪಟ್ಟಿದೆ‌ .

ಕೊರೋನ ರಾಜ್ಯದೆಲ್ಲೆಡೆ ಕೈ ಮೀರಿ ಹೋಗುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಊರುಗಳಿಂದ ಪ್ರಯಾಣಿಸಿ‌, ಒಂದೆಡೆ ಸೇರಿ ಪರೀಕ್ಷೆ ಬರೆಯುವಂತಹದು ಬಹಳ ಅಪಾಯಕಾರಿಯಾಗಿದೆ.

ಅಲ್ಲದೆ ಸರಕಾರಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ಸುಗಳ ಸೌಲಭ್ಯ ಕೊರತೆಯಿಂದಾಗಿ ಹಲವಾರು ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅಸಾಧ್ಯವಾಗುತ್ತಿರುವ ಪರಿಸ್ಥಿತಿ ಉಂಟಾಗಿದೆ.

ಇದನ್ನೆಲ್ಲಾ ಮನಗಂಡು ರಾಜ್ಯದ ಹಲವು ಶಿಕ್ಷಣ ಮಂಡಳಿಗಳು ಈಗಾಗಲೇ ಪರೀಕ್ಷೆಗಳನ್ನು ಮುಂದೂಡಿದ್ದಾರೆ, ಆದ್ದರಿಂದ ಈ ಕಠಿಣ ಪರಿಸ್ಥಿಯನ್ನು ಅರಿತುಕೊಂಡು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಎಪ್ರಿಲ್ 19 ರಂದು ನಿಗದಿಪಡಿಸಿದ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತರಿಪಡಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್‌ ಇಂಡಿಯಾ ರಾಜ್ಯ ಕಾರ್ಯದರ್ಶಿ ಅಲ್ತಾಫ್ ಹೊಸಪೇಟೆ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!