- Advertisement -
- Advertisement -
ವಿಟ್ಲ: ಪೆರುವಾಯಿ ಓಣಿಬಾಗಿಲು ನಿವಾಸಿ, ಪುತ್ತೂರು ಪುರಸಭೆಯ ಸಿಬ್ಬಂದಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇದೀಗ ಇದರ ಸುತ್ತಮುತ್ತಲಿನ ಎಲ್ಲರ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಎಲ್ಲರದ್ದು ನೆಗೆಟಿವ್ ವರದಿ ಬಂದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಪೆರುವಾಯಿ ಓಣಿ ಬಾಗಿಲು ನಿವಾಸಿ, ಪುತ್ತೂರು ಪುರಸಭೆಯ ಸಿಬ್ಬಂದಿಗೆ ಪಾಸಿಟಿವ್ ಪತ್ತೆಯಾಗಿತ್ತು. ಸೋಂಕಿತ ಈ ವ್ಯಕ್ತಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದರಿಂದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದರು. ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಓಣಿಬಾಗಿಲು ಮತ್ತು ಕುದ್ದುಪದವು ನಿವಾಸಿಗಳನ್ನು ಹೋಂ ಕ್ವಾರಂಟೈನ್ ನಲ್ಲಿದ್ದು, ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದೀಗ ಎಲ್ಲರ ವರದಿ ನೆಗೆಟಿವ್ ಬಂದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
- Advertisement -