ಬಂಟ್ವಾಳ:-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಸಿಲುಕಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಜನಾರ್ದನ ಪೂಜಾರಿಯವರು ಇಂದು ಕೊರೊನಾ ಸೋಂಕಿನಿಂದ ಗುಣಮುಖರಾಗಿ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.ಕಳೆದ ಜುಲೈ 4ರಂದು ಆಸ್ಪತ್ರೆಗೆ ದಾಖಲಾಗಿದ್ದ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಬಗ್ಗೆ ಪೂಜಾರಿಯವರು, ಸಾಮಾಜಿಕ ಜಾಲತಾಣದಲ್ಲಿ ಹಾರೈಕೆಯ ಧನ್ಯವಾದಗಳನ್ನ ತಿಳಿಸಿದ್ದಾರೆ.
ತಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ, ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೂ ಧನ್ಯವಾದ ಹೇಳಿದ್ದಾರೆ. ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ದಿಸಲು ಪೌಷ್ಟಿಕ ಆಹಾರ, ಕಷಾಯ ಸೇವನೆ ಮಾಡಿ. ಪ್ರತಿಯೊಬ್ಬರು ಜಾಗೃತೆ ವಹಿಸಿ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ” ಎಂದು ಪೂಜಾರಿಯವರು ಕಿವಿಮಾತು ಹೇಳಿದ್ದಾರೆ.