Tuesday, July 1, 2025
spot_imgspot_img
spot_imgspot_img

ಕೊರೊನಾ ಸೋಂಕು ಹೆಚ್ಚಳ: ಮಾ.17ರಂದು ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಮೋದಿ ಸಭೆ

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿನ ಎರಡನೇ ಅಲೆಯ ಭೀತಿ ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಚರ್ಚೆ ನಡೆಸಲು ಪ್ರಧಾನಿ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾರ್ಚ್​​ 17ರಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ.

ಮಾ.17ರ ಮಧ್ಯಾಹ್ನ 12:30ಕ್ಕೆ ಸಭೆ ಆರಂಭವಾಗಲಿದೆ. ಈ ಹಿಂದೆಯೂ ಲಾಕ್​​ಡೌನ್​ ಹಾಗೂ ಕೊರೊನಾ ಸಂಕಷ್ಟ ಹೆಚ್ಚಾದ ಸಮಯದಲ್ಲಿ ಮೋದಿ ಇಂತಹ ಸಭೆಗಳನ್ನು ನಡೆಸಿದ್ದರು. ಕಳೆದ ಜನವರಿಯಲ್ಲಿ ಕೊರೊನಾ ಲಸಿಕೆ ಅಭಿಯಾನ ಆರಂಭ ಮಾಡುವ ಮುನ್ನ ಕೊನೆಯ ಬಾರಿಗೆ ಮೋದಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದರು.

ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ದೇಶದ 8 ಪ್ರಮುಖ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿತ್ಯ ಹೆಚ್ಚಳವಾಗುತ್ತಿದೆ. ಜನರು ಸೋಂಕಿನ ಕುರಿತು ನಿರ್ಲಕ್ಷ್ಯ ವಹಿಸಿದರೆ ಸೋಂಕಿನ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಸಿಂಗ್ ಎಚ್ಚರಿಕೆ ನೀಡಿದ್ದರು.

- Advertisement -

Related news

error: Content is protected !!