- Advertisement -
- Advertisement -
ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಹಾವಳಿ ಮಿತಿ ಮೀರಿದೆ. ಕಳೆದ 24 ಗಂಟೆಗಳಲ್ಲಿ 34,956 ಪ್ರಕರಣಗಳು ಪತ್ತೆಯಾಗಿದೆ. ಹೀಗಾಗಿ ಕೊರೊನಾ ಸೋಂಕಿತರ ಸಂಖ್ಯೆ 10 ಲಕ್ಷ ಗಡಿ ದಾಟಿದೆ. ಈವರೆಗೆ ಕೊರೊನಾ ಪಾಸಿಟಿವ್ ಸಂಖ್ಯೆ 10,03,832 ಆಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೀಡಿದ ಮಾಹಿತಿ ಪ್ರಕಾರ, ಇನ್ನು ಒಂದೇ ದಿನ 687 ಮಂದಿ ಕೋವಿಡ್-19 ಗೆ ಬಲಿಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 25,602 ಆಗಿದೆ. ಇನ್ನು 3,42,473 ಪ್ರಕರಣಗಳು ಸಕ್ರೀಯವಾಗಿದ್ದು, 6,35,757 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಚಿವಾಲಯದ ಮಾಹಿತಿ ಪ್ರಕಾರ, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರಿದ್ದಾರೆ. ಒಟ್ಟು 2,84,281 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, 11,194 ಸಾವು ನೋವು ಸಂಭವಿಸಿದೆ. ತಮಿಳುನಾಡಿನಲ್ಲಿ 1,56,369 ಪ್ರಕರಣಗಳು ಪತ್ತೆಯಾಗಿದ್ದು, 2,236 ಸಾವು ಸಂಭವಿಸಿದೆ. ಇನ್ನು ದೆಹಲಿಯಲ್ಲಿ ಒಟ್ಟು 1,84,645 ಪ್ರಕರಣಗಳು ಮತ್ತು 3,545 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
- Advertisement -