- Advertisement -
- Advertisement -
ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಜೋರಾಗಿದೆ. ಕಳೆದ 24 ಗಂಟೆಗಳಲ್ಲಿ 49,310 ಮಂದಿಗೆ ಸೋಂಕು ದೃಢವಾಗಿದ್ದು, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ
12, 87,945ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಒಂದೇ ದಿನ 740 ಮಂದಿ ಬಲಿಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 30,601ಕ್ಕೆ ಏರಿಕರಯಾಗಿದೆ ಎಂದು ತಿಳಿಸಿದೆ.

ಈವರೆಗೆ 8,17,209 ಮಂದಿ ಗುಣಮುಖರಾಗಿದ್ದು, 4,40,135 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರಿದ್ದು, 3,47,502 ಮಂದಿಗೆ ಸೋಂಕು ವಕ್ಕರಿಸಿದೆ. ತಮಿಳುನಾಡಿನಲ್ಲಿ 1,92,964 ಮಂದಿಗೆ ಕೊರೊನಾ ಸೋಂಕು ತಗುಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 1,27,364 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ನೀಡಿದೆ.

- Advertisement -